ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನಿನ್ನೆ ಸಂಜೆ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಣಿಪುರದಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.
ಗೃಹ ಸಚಿವರ ನಿಕಟ ಮೇಲ್ವಿಚಾರಣೆಯಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರವು ಕಳೆದ ವಾರದಲ್ಲಿ ಹಿಂಸಾಚಾರವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಮರ್ಥವಾಗಿವೆ ಎಂದು ಮಣಿಪುರ ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಜೂನ್ 13 ರಿಂದ ಹಿಂಸಾಚಾರದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದಿದ್ದಾರೆ.
ಮಣಿಪುರದಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಶಾ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
ಗೃಹ ಸಚಿವರು ಮಣಿಪುರ ಸರ್ಕಾರಕ್ಕೆ ಶಾಶ್ವತ ಶಾಂತಿಯನ್ನು ಸಾಧಿಸುವ ಕೆಲಸವನ್ನು ಬಲಪಡಿಸಲು ಸಲಹೆ ನೀಡಿದರು ಮತ್ತು ರಾಜ್ಯದಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಿಕೊಳ್ಳಲು ಮಣಿಪುರದ ಮಧ್ಯಸ್ಥಗಾರರ ಸಹಕಾರವನ್ನು ಕೋರಿದರು ಎಂದಿದ್ದಾರೆ.
Called on Hon’ble Union Home Minister, Shri @AmitShah Ji in New Delhi today and briefed about the evolving situation on the ground in Manipur. Under Amit Shah Ji’s close supervision, the State and Central Govt have been able to control the violence to a great extent in the past… pic.twitter.com/Rz4qToLDni
— N.Biren Singh (@NBirenSingh) June 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.