ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಫಲವಾಗಿ ಭಾರತದ ರಸ್ತೆ ಜಾಲವು ಶೇ.59 ರಷ್ಟು ಬೆಳವಣಿಗೆಯನ್ನು ಕಂಡು ಇಂದು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ರಸ್ತೆ ಜಾಲವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಹೇಳಿದ್ದಾರೆ.
ಭಾರತವು ಸುಮಾರು 64 ಲಕ್ಷ ಕಿಮೀ ಒಟ್ಟು ರಸ್ತೆ ಜಾಲವನ್ನು ಹೊಂದಿದೆ, ಇದು ವಿಶ್ವದಲ್ಲೇ ಎರಡನೇ ಅತಿ ದೊಡ್ಡದಾಗಿದೆ. 2013-14ರಲ್ಲಿ 91,287 ಕಿಲೋಮೀಟರ್ಗಳಿಗೆ ಹೋಲಿಸಿದರೆ ಭಾರತದ ರಾಷ್ಟ್ರೀಯ ಹೆದ್ದಾರಿಗಳ ಜಾಲವು ಇಂದು 1,45,240 ಕಿಮೀಗಳಷ್ಟಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ‘ಮೋದಿ ಸರ್ಕಾರದ 9 ವರ್ಷ’ ಕುರಿತ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಈ ವಲಯದಲ್ಲಿ ಏಳು ವಿಶ್ವ ದಾಖಲೆಗಳನ್ನು ಮಾಡಿದೆ. ಭಾರತದ ರಸ್ತೆ ಜಾಲವು ಯುಎಸ್ ನಂತರ ವಿಶ್ವದ ಎರಡನೇ ಅತಿ ದೊಡ್ಡದಾಗಿದೆ” ಎಂದು ಅವರು ಹೇಳಿದರು.
2030 ರ ವೇಳೆಗೆ ಟೋಲ್ ಆದಾಯವನ್ನು ರೂ. 1,30,000 ಕೋಟಿಗೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗಡ್ಕರಿ ಹೇಳಿದರು. ಫಾಸ್ಟ್ಟ್ಯಾಗ್ಗಳ ಬಳಕೆಯು ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು 47 ಸೆಕೆಂಡುಗಳಿಗೆ ಕಡಿಮೆ ಮಾಡಲು ಸಹಾಯ ಮಾಡಿದೆ. ಇದನ್ನು 30 ಸೆಕೆಂಡುಗಳಿಗಿಂತ ಕಡಿಮೆ ಮಾಡಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.