ಭೋಪಾಲ್: ಚುನಾವಣೆ ಹತ್ತಿರ ಬರುತ್ತಿರುವಂತೆ ಮಧ್ಯಪ್ರದೇಶದಲ್ಲಿ ರಾಜಕೀಯ ಸಮರ ಜೋರಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನೇರವಾಗಿ ಹಣಾಹಣಿಗೆ ಸಜ್ಜಾಗಿವೆ.
ಈ ನಡುವೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನಿಂದ ಪ್ರೇರಿತವಾಗಿರುವ ಮಧ್ಯಪ್ರದೇಶ ಕಾಂಗ್ರೆಸ್ ತನ್ನ ಪ್ರಚಾರ ಕಾರ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಅನ್ನು ನಕಲು ಮಾಡುತ್ತಿದೆ. ಇಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಫೋನ್ ಪೇ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಇದೀಗ ಅದನ್ನು ಮಧ್ಯಪ್ರದೇಶದಲ್ಲೂ ಪುನರಾವರ್ತನೆ ಮಾಡಿದೆ. ಆದರೆ ಇದು ಅದಕ್ಕೆ ತಿರುಗು ಬಾಣವಾಗಿ ಪರಿಣಮಿಸಿದೆ.
ಭೋಪಾಲ್ನಾದ್ಯಂತ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಕಾಂಗ್ರೆಸ್ ಪೋಸ್ಟರ್ಗಳನ್ನು ಅಂಟಿಸಿದೆ, ಇದರಲ್ಲಿ ಫೋನ್ ಪೇ ಲೋಗೋ ಬಳಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಪಾವತಿ ಕಂಪನಿ ಫೋನ್ಪೇ ಪೋಸ್ಟರ್ಗಳಲ್ಲಿ ತನ್ನ ಲೋಗೋವನ್ನು ಬಳಸಿರುವುದನ್ನು ವಿರೋಧಿಸಿ ಕಠಿಣ ಎಚ್ಚರಿಕೆ ನೀಡಿದೆ.
ಪ್ರಚಾರದ ಭಾಗವಾಗಿ, ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್ನಿಂದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಅಂಗಡಿಗಳಲ್ಲಿನ ಕ್ಯೂಆರ್ ಕೋಡ್ಗಳನ್ನು ಹೋಲುವ ಪೋಸ್ಟರ್ಗಳನ್ನು ಚೌವ್ಹಾಣ್ ಫೋಟೋದೊಂದಿಗೆ ಅಂಟಿಸಿ ಕೆಲಸ ಮಾಡಲು ಕಮಿಷನ್ಗೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದೆ. ಪೋಸ್ಟರ್ಗಳು PhonePe ನ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಸಹ ಒಳಗೊಂಡಿವೆ. ಈ ಹಿನ್ನೆಲೆಯಲ್ಲಿ ಫೋನ್ ಪೇ ಕ್ರಮದ ಎಚ್ಚರಿಕೆ ನೀಡಿದೆ.
PhonePe objects to the unauthorized usage of its brand logo, by any third party, be it political or non-political. We are not associated with any political campaign or party.
— PhonePe (@PhonePe) June 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.