ನವದೆಹಲಿ: ಭಾರತದ ವಿರುದ್ಧ ದ್ವೇಷವನ್ನು ಹರಡುತ್ತಿರುವವರ ಮುಖ ಮತ್ತೊಮ್ಮೆ ಬಯಲಾಗಿದೆ. ಬಕ್ರೀದ್ನಂದು ಮಸೀದಿಯ ಹೊರಗೆ ‘ಲವ್ ಪಾಕಿಸ್ತಾನ್ʼ ಮತ್ತು ʼಪಾಕಿಸ್ತಾನ್ ಜಿಂದಾಬಾದ್’ ಎಂದು ಮುದ್ರಿಸಲಾದ ಬಲೂನ್ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಹೊಟ್ಗಿ ರಸ್ತೆಯಲ್ಲಿರುವ ಶಾಹಿ ಆಲಂಗೀರ್ ಈದ್ಗಾ ಮೈದಾನದಲ್ಲಿ ಗುರುವಾರ ಈ ಘಟನೆ ನಡೆದಿದೆ. ಅಲ್ಲಿದ್ದ ಮುಸ್ಲಿಂ ಸಮುದಾಯದ ಕೆಲವರು ಇದನ್ನು ವಿರೋಧಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಜನರ ಪ್ರಕಾರ, ಆಕಾಶಬುಟ್ಟಿಗಳ ಮೇಲೆ ಇತರ ಆಕ್ಷೇಪಾರ್ಹ ವಾಕ್ಯವನ್ನು ಕೂಡ ಬರೆಯಲಾಗಿದೆ. ಇದನ್ನು ಮನಗಂಡ ದರ್ಗಾಕ್ಕೆ ಭೇಟಿ ನೀಡಿದ ಜಾಗೃತ ಮುಸ್ಲಿಮರು ಕೂಡಲೇ ಆ ಪ್ರದೇಶದಲ್ಲಿದ್ದ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ, ಬಿಜಾಪುರ ನಾಕಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 153(ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಅವರನ್ನು ಬಂಧಿಸಿದ್ದಾರೆ.
Shocking! Two men were selling balloons with "Love Pakistan & Pakistan Zindabad" printed on them outside a #Mosque 🕌 on #Bakrid in Maharashtra's Solapur district; Arrested
The incident took place outside Shah Alamgir Idgah on Hotgi Road where muslim people had gathered in… pic.twitter.com/xfX78PnjmG
— Ashwini Shrivastava (@AshwiniSahaya) June 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.