ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಘಟನೆ ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಈ ಬಗೆಗಿನ ವಿಡಿಯೋವೊಂದು ನಿನ್ನೆ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೂ ತುತ್ತಾಗಿತ್ತು.
ಇದೀಗ ಮೂತ್ರ ವಿಸರ್ಜನೆ ಮಾಡಲಾಗಿದ್ದ ವ್ಯಕ್ತಿಯ ಪಾದವನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೊಳೆಯುವ ಮೂಲಕ ಸಮಾಜಕ್ಕೆ ಮಹತ್ವದ ಸಂದೇಶ ಸಾರಿದ್ದಾರೆ. ಬುಡಕಟ್ಟು ವ್ಯಕ್ತಿ ದಶಮತ್ ರಾವತ್ ಅವರನ್ನು ಸಿಎಂ ತಮ್ಮ ನಿವಾಸಕ್ಕೆ ಕರೆತಂದು ಅವರ ಪಾದವನ್ನು ನೀರಿನಿಂದ ತೊಳೆದಿದ್ದಾರೆ.
ಸಿದ್ಧಿ ಜಿಲ್ಲೆಯಲ್ಲಿ ನಿನ್ನೆ ವೈರಲ್ ಆದ ವೀಡಿಯೊದಲ್ಲಿ, ಆರೋಪಿ ಪ್ರವೇಶ್ ಶುಕ್ಲಾ, ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ನೋಡಿ ತುಂಬಾ ನೋವಾಗಿತ್ತು. ಅದಕ್ಕಾಗಿ ನಿನ್ನ ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಘಟನೆ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ನಿನ್ನೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ.
#WATCH via ANI Multimedia | Madhya Pradesh CM Shivraj Singh Chouhan washes feet, seeks apology from Sidhi victim at CM’s residence in Bhopalhttps://t.co/8E8ephc1jp
— ANI (@ANI) July 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.