ಬೆಂಗಳೂರು: ದೈವಾರಾಧನೆಯ ವಿಷಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಶಾಸಕ ಸುನೀಲ್ ಕುಮಾರ್ ಅವರು ವಿಧಾನಸಭೆಯ ಗಮನ ಸೆಳೆದಿದ್ದಾರೆ. ಅಲ್ಲದೇ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದಿದ್ದಾರೆ
ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಸೇರಿದಂತೆ ಮೂರು ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದು ತಪ್ಪು. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದಿದ್ದಾರೆ.
ಶಿಕ್ಷಣ ಇಲಾಖೆ ಕೂಡಲೇ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಕಾಂತಾರ ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಸಿಕ್ಕ ಸಿಕ್ಕ ಕಡೆಗಳಲ್ಲಿ ಅನುಕರಿಸಲು ಶುರು ಮಾಡಿರುವುದು ದೈವಾರಾಧಕರ ಭಾವನೆಗೆ ಧಕ್ಕೆ ತಂದಿದೆ. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕುವ ಅಗತ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.