ಬೆಂಗಳೂರು: ಇಂದು ಬಜೆಟ್ನಲ್ಲಿ ಹಠಾತ್ ಹೃದಯ ಸಂಬಂಧಿ ಕಾಯಿಲೆಯಿಂದ ಸಾವು ಸಂಭವಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ರಾಜ್ಯದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ಗಳನ್ನು (AED) ಅಳವಡಿಸುವುದಾಗಿ ಸಿಎಂ ಹೇಳಿದ್ದಾರೆ
ನಟ ಪುನೀತ್ ರಾಜ್ ಕುಮಾರ್ ಹಠಾತ್ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮುಡಿದಿತ್ತು. ಹೃದಯಾಘಾತದಿಂದ ಸಂಭವಿಸಿದ ಅವರ ಸಾವು ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು. ಪುನೀತ್ ಕುಟುಂಬದ ವೈದ್ಯರ ಮೇಲೆಯೇ ಅನುಮಾನ ಪಡುವಂತಹ ಘಟನೆಗಳು ಕೂಡ ನಡೆದವು. ಕ್ಷಿಪ್ರವೇಗದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ಅವರು ಬದುಕಿರುತ್ತಿದ್ದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್ ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಅನುದಾನ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.