ಬೆಂಗಳೂರು: ಅಲ್ಪಸಂಖ್ಯಾತ ಓಲೈಕೆಗೆ ಹೆಸರುವಾಸಿಯಾಗಿರುವ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಅಲ್ಪಸಂಖ್ಯಾತ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಅವರು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಬ್ಯಾಂಕ್ ಸಾಲದ ಮೇಲೆ ಒಂದು ಲಕ್ಷ ರೂಪಾಯಿ ಸಹಾಯಧನವನ್ನು ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.
ಅಷ್ಟು ಮಾತ್ರವಲ್ಲದೆ ಅಲ್ಪಸಂಖ್ಯಾತ ನಿರುದ್ಯೋಗಿಗಳ ವಾಹನ ಖರೀದಿಸಾಲಕ್ಕೆ ಮೂರು ಲಕ್ಷ ಸಹಾಯಧನ ಸಿಗಲಿದೆ. ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿಗೆ 360 ಕೋಟಿ ರೂಪಾಯಿಯನ್ನು ಸಿಎಂ ಬಜೆಟ್ನಲ್ಲಿ ಮೀಸಲಿಟ್ಟಿದ್ದಾರೆ.
54 ಕೋಟಿ ರೂಪಾಯಿ ವೆಚ್ಚದಲ್ಲಿ 126 ಶಾದಿ ಮಹಲ್ ನಿರ್ಮಾಣ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅಲ್ಪಸಂಖ್ಯಾತರ ಹಜ್ ಭವನದಲ್ಲಿ ಕೆಎಎಸ್ ಮತ್ತು ಐಎಎಸ್ ಪರೀಕ್ಷೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಭವನದಲ್ಲಿ ವಸತಿ ಸಹಿತ ವ್ಯವಸ್ಥೆ ಮಾಡಲಿದ್ದೇವೆ ಎಂದಿದ್ದಾರೆ.
ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಕ್ರೈಸ್ಥರ ದೀರ್ಘಕಾಲದ ಬೇಡಿಕೆಯನ್ನು ನೆರವೇರಿಸುವುದಾಗಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.