ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭೀಕರವಾಗಿದ್ದು, ಈಗಾಗಲೇ 11 ಮಂದಿ ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವ ಸಲುವಾಗಿ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಇಂದು ಉತ್ತರ 24 ಪರಗಣಗಳ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿದರು. ಪಿರ್ಗಾಚಾದಲ್ಲಿ ಮೃತನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದರು.
ಬಳಿಕ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿರುವ ಬರಾಸತ್ನ ಆಸ್ಪತ್ರೆಗೆ ತೆರಳಿ ವೈದ್ಯರೊಂದಿಗೆ ಮಾತನಾಡಿದ್ದಾರೆ. ” ರಾಜ್ಯಪಾಲರು ವ್ಯಕ್ತಿಯನ್ನು ನಗರ ಮೂಲದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದರು. ಅವನ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಮತದಾನದ ಬಗ್ಗೆ ವಿಚಾರಿಸಿದರು” ಎಂದು ಮೂಲಗಳು ತಿಳಿಸಿವೆ.
ರಾಜ್ಯಪಾಲರು ಸಂತ್ರಸ್ತರ ಸಂಕಷ್ಟ ಆಲಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗ (SEC) ಮತ್ತು ಪೊಲೀಸರಿಗೆ ಕರೆ ಮಾಡಲು ಪ್ರಯತ್ನಿಸಿದರು ಆದರೆ ಮೊಬೈಲ್ ಸಂಪರ್ಕದ ಸಮಸ್ಯೆಗಳ ಕಾರಣ ಸಾಧ್ಯವಾಗಲಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ
ನಂತರ ಅವರು ಕಮರ್ಹಟಿಯ ವಿಶ್ರಾಂತಿ ಗೃಹಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಲು ಅಧಿಕಾರಿಗಳನ್ನು ಕರೆದರು ಎಂದು ಮೂಲಗಳು ತಿಳಿಸಿವೆ.
ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರ ಕೇಂದ್ರೀ ಪಡೆಗಳನ್ನು ನಿಯೋಜನೆ ಮಾಡಿದೆ. ಬಿಗಿ ಭದ್ರತೆಯ ನಡುವೆ ಮತದಾನ ನಡೆದರೂ ರಾಜಕೀಯ ಹಿಂಸಾಚಾರ ಅಲ್ಲಿ ಮುಂದುವರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.