ನವದೆಹಲಿ: ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಪಾಕಿಸ್ತಾನದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ವಿಟರ್ ನಿರ್ಬಂಧಿಸಿದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿದೆ ಗಿಲ್ಗಿಟ್-ಬಾಲ್ಟಿಸ್ತಾನ್ವನ್ನು ಅದು ತೋರಿಸುತ್ತಿದೆ.
ಪಾಕಿಸ್ತಾನಿ ಇಂಗ್ಲಿಷ್ ಭಾಷೆಯ ಡಾನ್ ಪತ್ರಿಕೆಯ ಪ್ರಕಾರ, ಬಳಕೆದಾರರು ಅಪ್ಲಿಕೇಶನ್ನಲ್ಲಿ ಲೊಕೇಶನ್ ಫೀಚರ್ ಅನ್ನು ಟರ್ನ್ ಮಾಡಿದದ ನಂತರವೂ, ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಿಂದ ಕಳುಹಿಸಲಾದ ಟ್ವೀಟ್ಗಳನ್ನು ಜಮ್ಮು ಮತ್ತು ಕಾಶ್ಮೀರದಿಂದ ಮೂಲವೆಂದು ಗುರುತಿಸಲಾಗುತ್ತಿದೆ.
ಸ್ಥಳೀಯರು ಟ್ವಿಟರ್ ಸ್ಥಳದಲ್ಲಿ ಬದಲಾವಣೆಗಳನ್ನು ಸ್ಪಷ್ಟವಾಗಿ ತೋರಿಸಿದ್ದಾರೆ ಮತ್ತು ಪಾಕಿಸ್ತಾನ ಸರ್ಕಾರದ ಅಧಿಕೃತ ಖಾತೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಪ್ರದೇಶದಿಂದ ಸರ್ಕಾರದ ಅಧಿಕೃತ ಖಾತೆಯನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ಬಳಕೆದಾರರು ಖಾತೆಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ, “ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಖಾತೆಯನ್ನು ತಡೆಹಿಡಿಯಲಾಗಿದೆ” ಎಂಬ ಸಂದೇಶವನ್ನು ಪ್ರದರ್ಶಿಸಲಾಗಿದೆ.
ಆದರೆ ಪಾಕಿಸ್ತಾನದ ಅಧಿಕಾರಿಗಳು ಅಂತಹ ಯಾವುದೇ ಬದಲಾವಣೆಗಳನ್ನು ನಿರಾಕರಿಸಿದ್ದಾರೆ ಮತ್ತು ‘ಆಧಾರರಹಿತ’ ಎಂದು ವಾದಿಸಿದ್ದಾರೆ. “ಇಡೀ ಗಿಲ್ಗಿಟ್ ಬಾಲ್ಟಿಸ್ತಾನ್ನಲ್ಲಿ ಇಂಟರ್ನೆಟ್, ಮಾಧ್ಯಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಯಾವುದೇ ನಿರ್ಬಂಧಗಳಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.