ಬೆಂಗಳೂರು: ಪ್ರಮುಖ ಜೈನ (ದಿಗಂಬರ) ಸನ್ಯಾಸಿ, ಮುನಿ ಕಾಮಕುಮಾರ್ ನಂದಿ ಮಹಾರಾಜ್ ಅವರನ್ನು ಬರ್ಬರವಾಗಿ ಕೊಂದು ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಘಟನೆ ಬೆಳಗಾವಿಯ ಚಿಕ್ಕೋಡಿಸಮೀಪದ ಹಿರೇಕೋಡಿ ಗ್ರಾಮದಲ್ಲಿ ಜುಲೈ 8 ರಂದು ನಡೆದಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು.
ಮುನಿಗಳು ಜುಲೈ 6, 2023 ರಿಂದ ನಾಪತ್ತೆಯಾಗಿದ್ದರು. ಅವರನ್ನು ದುಷ್ಕರ್ಮಿಗಳು ಕರೆಂಟ್ ಶಾಕ್ ನೀಡಿ ಕೊಂದು ಬಳಿಕ ತುಂಡು ತುಂಡಾಗಿ ಕತ್ತರಿಸಿದ್ದರು. ಆದರೆ ಇಷ್ಟು ಭೀಕರ ಘಟನೆಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಪ್ರಕರಣವನ್ನ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಕೊಲೆಗಡುಕರನ್ನು ರಕ್ಷಿಸಲಾಗುತ್ತಿದೆ ಎಂಬ ಶಂಕೆ ಜನರಿಗೆ ಮೂಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, ಸಿಬಿಐ ತನಿಖೆಯ ಅಗತ್ಯವಿಲ್ಲ, ಪ್ರಕರಣದಲ್ಲಿ ಯಾವುದೇ ತಾರತಮ್ಯ ನಡೆಯುತ್ತಿಲ್ಲ ಮತ್ತು ಅಪರಾಧಿಗಳನ್ನು ಬಂಧಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
ಇಲಾಖೆಯ ತನಿಖೆಯ ನಂತರವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಸಚಿವರು ಹೇಳಿದ್ದಾರೆ. ಆರೋಪ ಮಾಡುವುದು ಸರಿಯಲ್ಲ, ಕಾನೂನು ಕ್ರಮ ಕೈಗೊಳ್ಳಲಾಗುವುದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಆರೋಪಿಗಳನ್ನು ನಾರಾಯಣ ಬಸಪ್ಪ ಮಡಿ ಮತ್ತು ಹಾಸನದ ದಲಾಯತ್ ಎಂದು ಗುರುತಿಸಲಾಗಿದ್ದು, ಸನ್ಯಾಸಿಯನ್ನು ಕೊಲೆ ಮಾಡಿ ಕೊಚ್ಚಿದ ದೇಹವನ್ನು ಬೋರ್ವೆಲ್ಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಕೊಲೆಯ ಹಿಂದೆ ಷಡ್ಯಂತ್ರ ಇರಬಹುದು ಎಂಬುದು ಜನರ ಬಲವಾದ ಶಂಕೆ. ಆದರೆ ಇದನ್ನು ಸಿಬಿಐಗೆ ವಹಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
Murder of a Jain monk | The Police are working to immediately arrest the criminals and take legal action. Legal action is a natural process. There is no question of discrimination. After the incident, Police immediately took action after a complaint was made. The Jain monks in… pic.twitter.com/D7Sra7CZ6Y
— ANI (@ANI) July 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.