ನವದೆಹಲಿ: 2019ರಲ್ಲಿ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ತಾವು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿಗಳನ್ನು ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಹಿಂಪಡೆದಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇಂದು ಇವರ ಅರ್ಜಿಗಳನ್ನು ಹಿಂಪಡೆಯಲು ಅವಕಾಶ ಮಾಡಿಕೊಟ್ಟಿತು ಮತ್ತು ಅರ್ಜಿದಾರರ ಪಟ್ಟಿಯಿಂದ ಅವರ ಹೆಸರನ್ನು ಅಳಿಸುವಂತೆ ಸೂಚಿಸಿದೆ.
ಎಂಎಸ್ ಫೈಸಲ್ 2009 ರಲ್ಲಿ ನಾಗರಿಕ ಸೇವೆಗಳ ಪ್ರವೇಶ ಪರೀಕ್ಷೆ UPSC ಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಮೊದಲ ಬಾರಿಗೆ ಸುದ್ದಿ ಮಾಡಿದ್ದರು, ಈ ಸಾಧನೆ ಮಾಡಿದ ಮೊದಲ ಕಾಶ್ಮೀರಿಯಾದರು. ಹಲವಾರು ಸರ್ಕಾರಿ ಹುದ್ದೆ ನಿಭಾಯಿಸಿ 2019ರಲ್ಲಿ “ಕಾಶ್ಮೀರದಲ್ಲಿ ನಿರಂತರ ಹತ್ಯೆಗಳನ್ನ” ಪ್ರತಿಭಟಿಸಲು ಸೇವೆಗೆ ರಾಜೀನಾಮೆ ನೀಡಿದರು. ನಂತರ ಅವರು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ಎಂಬ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾಗಿದ್ದ ಶೆಹ್ಲಾ ರಶೀದ್, 2016 ರಲ್ಲಿ ದೇಶದ್ರೋಹದ ಆರೋಪದ ಮೇಲೆ ಬಂಧಿತರಾದ ಕನ್ಹಯ್ಯಾ ಕುಮಾರ್ ಮತ್ತು ಉಮರ್ ಖಾಲಿದ್ ಸೇರಿದಂತೆ ಹಲವಾರು ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆಂದೋಲನದ ಸಮಯದಲ್ಲಿ ಪ್ರಾಮುಖ್ಯತೆಯನ್ನು ಪಡೆದು ಮುನ್ನಲೆಗೆ ಬಂದಿದ್ದರು. ಕುಮಾರ್ ಈಗ ಕಾಂಗ್ರೆಸ್ ನಾಯಕ. ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್ ಜೈಲಿನಲ್ಲಿದ್ದಾರೆ. ಶೆಹ್ಲಾ ರಶೀದ್ ನಂತರ ಶಾ ಫೈಸಲ್ ಅವರ ಪಕ್ಷಕ್ಕೆ ಸೇರಿದ್ದಾರೆ.
370, for many Kashmiris like me, is a thing of the past.
Jhelum and Ganga have merged in the great Indian Ocean for good.
There is no going back. There is only marching forward. pic.twitter.com/3cgXRWSxW0
— Shah Faesal (@shahfaesal) July 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.