ನವದೆಹಲಿ: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ಗೆ ಮೂರು ದಿನಗಳ ಸುದೀರ್ಘ ಭೇಟಿಯನ್ನು ಮಂಗಳವಾರ ಪ್ರಾರಂಭಿಸಿದ್ದಾರೆ.
ಪ್ರವಾಸದ ಮೊದಲ ದಿನ, ಕೇಂದ್ರ ಸಚಿವರು ಲೇಹ್ನ ಜಿವೆತ್ಸಾಲ್ನಲ್ಲಿ ದಲೈ ಲಾಮಾ ಅವರನ್ನು ಭೇಟಿ ಮಾಡಿದರು. ಚೋಗ್ಲಾಮ್ಸರ್ ಬಳಿಯ ಶೆವತ್ಸೆಲ್ ಬೋಧನಾ ಮೈದಾನದಲ್ಲಿ ಆಧ್ಯಾತ್ಮಿಕ ಪ್ರವಚನ ನೀಡಲು ಲೇಹ್ಗೆ ದಲೈ ಲಾಮಾ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರನ್ನು ಸ್ವಾಗತಿಸಿದರು.
ಸಚಿವರು ಪೂರ್ವ ಲಡಾಖ್ನ ಭಾರತ-ಚೀನಾ ಗಡಿಯಲ್ಲಿರುವ ಗಡಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಕೊರ್ಝೋಕ್ ಮತ್ತು ಚುಮುರ್ ಗ್ರಾಮಗಳಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) ಯೋಧರೊಂದಿಗೆ ಅವರು ಸಂವಾದ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಗಡಿ ಗ್ರಾಮಗಳಿಗೆ ತೆರಳುವ ಮುನ್ನ ಲೇಹ್ನಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಸರ್ಕಾರದ ಅಭಿವೃದ್ಧಿ ಯೋಜನೆಗಳು ಗಡಿ ಪ್ರದೇಶಗಳ ಕೊನೆಯ ಹಳ್ಳಿಗಳನ್ನು ತಲುಪಿವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.