ನವದೆಹಲಿ: ಜೈನ ಸನ್ಯಾಸಿಯ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ.
ಕಳೆದ ಶನಿವಾರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಹೊಲವೊಂದರಲ್ಲಿ ನಿಷ್ಕ್ರಿಯಗೊಂಡಿದ್ದ ಬೋರ್ವೆಲ್ನಿಂದ ದಿಗಂಬರ ಶ್ರೀ ಕಾಮಕುಮಾರ ನಂದಿ ಮಹಾರಾಜರ ದೇಹದ ಭಾಗಗಳನ್ನು ಪೊಲೀಸರು ಹೊರತೆಗೆದಿದ್ದರು. ಸನ್ಯಾಸಿ ವಾಸವಿದ್ದ ಆಶ್ರಮದ ಮ್ಯಾನೇಜರ್ ಅವರು ಸನ್ಯಾಸಿ ಕಾಣೆಯಾಗಿದ್ದಾರೆ ಎಂದು ಮೊದಲು ದೂರು ನೀಡಿದ್ದರು. ಪ್ರಾಥಮಿಕ ತನಿಖೆಯ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಯಿತು. ಆದರೆ ಪ್ರಕರಣದ ಸಿಬಿಐ ತನಿಖೆಗೆ ಸರ್ಕಾರ ನಿರಾಕರಿಸಿದ್ದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.
ನಂತರ ರಾಜಭವನಕ್ಕೆ ಪಾದಯಾತ್ರೆ ತೆರಳಿದ ಬಿಜೆಪಿ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಬದುಕಲು ದುಸ್ತರವಾಗುತ್ತದೆ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ನಿರ್ದೇಶನ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ತುಘಲಕ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅರಾಜಕತೆ ಸೃಷ್ಟಿಯಾಗಿದೆ.
ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ.
ಪ್ರಕರಣಗಳಲ್ಲಿ ಪ್ರಭಾವಿಗಳನ್ನು ಹಾಗೂ ಸಚಿವರ ಪುತ್ರರನ್ನು ರಕ್ಷಣೆ ಮಾಡಲಾಗುತ್ತಿದೆ. ಕೊಲೆಗಡುಕ ಸರ್ಕಾರಕ್ಕೆ ಧಿಕ್ಕಾರ..! ಧಿಕ್ಕಾರ..! pic.twitter.com/rw5BhhDJrW
— BJP Karnataka (@BJP4Karnataka) July 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.