ಹೈದರಾಬಾದ್: ಭಾರತದ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾದ ಚಂದ್ರಯಾನ-3 ರ ಕ್ಷಣಗಣನೆ ಇಂದು ಮಧ್ಯಾಹ್ನ ಪ್ರಾರಂಭವಾಗುತ್ತದೆ. 26 ಗಂಟೆಗಳ ಕೌಂಟ್ಡೌನ್ ಮಧ್ಯಾಹ್ನ 1.05 ಕ್ಕೆ ಪ್ರಾರಂಭವಾಗುತ್ತದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಮಧ್ಯಾಹ್ನ 2.35 ಕ್ಕೆ ಎಲ್ವಿಎಂ 3 ರಾಕೆಟ್ ಮೂಲಕ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಿದೆ.
ಈ ಹಿನ್ನೆಲೆಯಲ್ಲಿ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿಯೊಂದಿಗೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ. ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಮಿನಿಯೇಚರ್ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.
ಚಂದ್ರಯಾನ-3 ಮಿಷನ್ ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.
ಭಾರತವು ತನ್ನ ಬಾಹ್ಯಾಕಾಶ ನೌಕೆಯನ್ನು ಚಂದ್ರನ ಮೇಲ್ಮೈಯಲ್ಲಿ ಇಳಿಸಿದ ನಾಲ್ಕನೇ ದೇಶವಾಗಲಿದೆ ಮತ್ತು ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್ಗಾಗಿ ಈ ಮಿಷನ್ ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ.
#WATCH | Andhra Pradesh | A team of ISRO scientists team arrive at Tirupati Venkatachalapathy Temple, with a miniature model of Chandrayaan-3 to offer prayers.
Chandrayaan-3 will be launched on July 14, at 2:35 pm IST from Satish Dhawan Space Centre, Sriharikota, ISRO had… pic.twitter.com/2ZRefjrzA5
— ANI (@ANI) July 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.