ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಘಟಕ ನಿರ್ಮಾಣಕ್ಕೆ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ ಕಂಪನಿ ಉತ್ಸುಹುಕವಾಗಿದ್ದು, ಇದಕ್ಕಾಗಿ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ವಾರ್ಷಿಕ 5 ಲಕ್ಷ ಎಲೆಕ್ಟ್ರಿಕ್ ವಾಹನ ತಯಾರಿಸುವ ಸಾಮರ್ಥ್ಯದ ಘಟಕ ಸ್ಥಾಪನೆ ಸಂಬಂಧ ಹೂಡಿಕೆಯ ಪ್ರಸ್ತಾಪಕ್ಕಾಗಿ ಟೆಸ್ಲಾ ಭಾರತ ಸರ್ಕಾರದೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ಕಾರಿನ ಬೆಲೆ 20 ಲಕ್ಷ ರೂ. ನಿಂದ ಆರಂಭವಾಗುವ ಸಾಧ್ಯತೆಯಿದೆ. ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ಭಾರತದಿಂದ ಕಾರುಗಳನ್ನು ರಫ್ತು ಮಾಡಲು ಟೆಸ್ಲಾ ಮುಂದಾಗಿದೆ ಎಂದು ವರದಿಯಾಗಿದೆ.
ಕಳೆದ ತಿಂಗಳು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮಸ್ಕ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಸ್ಕ್, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದರು.
ಈಗಾಗಲೇ ಅಮೆರಿಕ, ಕೆನಡಾ, ಜರ್ಮನಿ, ಚೀನಾ, ಮೆಕ್ಸಿಕೋದಲ್ಲಿ ಟೆಸ್ಲಾ ಕಂಪನಿ ದೊಡ್ಡ ಫ್ಯಾಕ್ಟರಿ ತೆರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.