ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಲುವಾಗಿ ನೆರೆಯ ಪಾಕಿಸ್ಥಾನದಿಂದ ಉಗ್ರರು ನಿರಂತರವಾಗಿ ಭಾರತದೊಳಗೆ ಅಕ್ರಮವಾಗಿ ನುಸುಳುವ ಪ್ರಯತ್ನಗಳನ್ನು ನಡೆಸುತ್ತಲೇ ಬರುತ್ತಿದ್ದಾರೆ. ಭಾರತೀಯರ ಸೇನೆ ಇಂತಹವರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ.
ಇಂದು ಜಮ್ಮು-ಕಾಶ್ಮೀರದ ಪೂಂಚ್ನಲ್ಲಿ ನುಸುಳುಕೋರರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ವರದಿಗಳ ಪ್ರಕಾರ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿದ್ದಾರೆ. ಹತ್ಯೆಗೀಡಾದ ಇಬ್ಬರೂ ಉಗ್ರರು ಪಾಕಿಸ್ತಾನಿ ಮೂಲದವರು ಎಂದು ಮಾಧ್ಯಮಗಳು ವರದಿ ಮಾಡಿವೆ.
LOC ಯಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆಯು ಪೂಂಚ್ ಸೆಕ್ಟರ್ನ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ನಡೆಯುತ್ತಿದೆ. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆಯ ದೃಶ್ಯಗಳನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳಲಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಹೆಚ್ಚುವರಿ ಪಡೆಗಳನ್ನು ಪೂಂಚ್ಗೆ ರವಾನಿಸಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕು.
#WATCH | J&K: A search operation of the Indian Army and J&K Police is underway along LOC in the Poonch sector after suspicious movement was observed at LOC
(Visuals deferred by time) https://t.co/9dJsfhQO2J pic.twitter.com/oRApfTv0lE
— ANI (@ANI) July 17, 2023
J&K | A search operation of the Indian Army and J&K Police is underway along LOC in the Poonch sector after suspicious movement was observed at LOC.
— ANI (@ANI) July 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.