ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ.
ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯುವುದು ಸಾಮಾನ್ಯ ಪದ್ಧತಿಯಾಗಿದೆ. ಇಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ಸಹಕಾರ ಕೋರುವ ಸಾಧ್ಯತೆ ಇದೆ.
ಈ ಬಾರಿ ಮಣಿಪುರ ಹಿಂಸಾಚಾರ, ದೆಹಲಿ ಸುಗ್ರೀವಾಜ್ಞೆ ಮತ್ತು ಇತರ ಹಲವು ವಿಷಯಗಳ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಏತನ್ಮಧ್ಯೆ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಕರೆದಿದ್ದ ಇದೇ ರೀತಿಯ ಸರ್ವಪಕ್ಷ ಸಭೆಯನ್ನು, ಹಲವು ಪಕ್ಷಗಳ ನಾಯಕರು ಲಭ್ಯವಿಲ್ಲದ ಕಾರಣ ಮುಂದೂಡಲಾಗಿದೆ.
ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿದ್ದರೆ, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.