ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಅಧಿವೇಶನವು ಗದ್ದಲದ ಕೇಂದ್ರವಾಗಿ ಮಾರ್ಪಟ್ಟಿದೆ. 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿದ ಸ್ಪೀಕರ್ ಯುಟಿ ಖಾದರ್ ಮತ್ತು ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಲು ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸದನದಲ್ಲಿ ಬಿಲ್ಗಳು ಮತ್ತು ಅಜೆಂಡಾ ದಾಖಲೆಗಳ ಪ್ರತಿಗಳನ್ನು ಹರಿದು ಅಧ್ಯಕ್ಷರ ಕಡೆಗೆ ಎಸೆದ ನಂತರ ಅವರ “ಅಸಭ್ಯ ಮತ್ತು ಅಗೌರವದ ನಡವಳಿಕೆ”ಗಾಗಿ ಅವರನ್ನು ಅಮಾನತುಗೊಳಿಸಲಾಯಿತು ಎಂದು ಸ್ಪೀಕರ್ ಸಮಜಾಯಿಸಿ ನೀಡಿದ್ದಾರೆ.
ನಾಲ್ಕು ಮಾಜಿ ಸಚಿವರಾದ ಆರ್ ಅಶೋಕ, ಡಾ ಸಿ ಎನ್ ಅಶ್ವಥ್ ನಾರಾಯಣ, ವಿ ಸುನೀಲ್ ಕುಮಾರ್ ಮತ್ತು ಆರಗ ಜ್ಞಾನೇಂದ್ರ ಸೇರಿದಂತೆ 10 ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಇನ್ನು ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಗುರುವಾರ ಕಲಾಪವನ್ನು ಬಹಿಷ್ಕರಿಸಿವೆ.
ಶಾಸಕರ ಅಮಾನತನ್ನು ಖಂಡಿಸಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.
A day after 10 @BJP4Karnataka MLAs suspended after ruckus over govt deputing IAS officers to receive leaders attending Oppn parties meeting, MLAs staged protest near Mahatma Gandhi statue. Meanwhile, Speaker @utkhader
called on the Governor.@NewIndianXpress@XpressBengaluru pic.twitter.com/owWcdpJfJO— Ramu Patil (@ramupatil_TNIE) July 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.