ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
2019 ರಲ್ಲಿ ಕರ್ನಾಟಕದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ʼಮೋದಿ ಸರ್ನೇಮ್ʼ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯ ರಾಹುಲ್ಗೆ ಛಿಮಾರಿ ಹಾಕಿತ್ತು, ತಪ್ಪಿತಸ್ಥ ಎಂದು ಘೋಷಿಸಿತ್ತು.
ಪ್ರಕರಣದಲ್ಲಿ ತನ್ನ ದೋಷಾರೋಪಣೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
ಅಪರಾಧದ ಮಧ್ಯಂತರ ಅಮಾನತಿಗಾಗಿ ರಾಹುಲ್ ಪರ ಹಿರಿಯ ವಕೀಲ ಎ.ಎಂ ಸಿಂಘ್ವಿ, ವಕೀಲ ಪ್ರಸನ್ನ ಎಸ್ ಅವರ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಇನ್ನೊಂದು ಕಡೆಯ ವಿಚಾರಣೆಯಿಲ್ಲದೆ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೇ ಈ ಸಂಬಂಧ ದೂರುದಾರ ಪೂರ್ಣೇಶ್ ಮೋದಿ ಮತ್ತು ಗುಜರಾತ್ ರಾಜ್ಯಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ ಮತ್ತು ಆಗಸ್ಟ್ 4 ರಂದು ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.