ಜೈಪುರ: ರಾಜಸ್ಥಾನದಲ್ಲೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಎಂದು ಹೇಳಿದ್ದಕ್ಕೆ ರಾಜಸ್ಥಾನದ ಸಚಿವರೊಬ್ಬರು ತಮ್ಮ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದಾರೆ. ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಜಾಗೊಳಿಸಿದ್ದಾರೆ.
ರಾಜೇಂದ್ರ ಗುಧಾ ಅವರು ಸೈನಿಕ ಕಲ್ಯಾಣ್, ಗೃಹರಕ್ಷಕ ದಳ, ನಾಗರಿಕಾ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಗುಧಾ ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕೆಲವೇ ಗಂಟೆಗಳ ಬಳಿಕ ವಜಾಗೊಂಡಿದ್ದಾರೆ.
ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ರಾಜಸ್ಥಾನದ ಮಹಿಳೆಯರ ಮೇಲಿನ ಘಟನೆಗಳೊಂದಿಗೆ ರಾಜೇಂದ್ರ ಗುಧಾ ಹೋಲಿಕೆ ಮಾಡಿದ್ದರು. ರಾಜಸ್ಥಾನದಲ್ಲೂ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆಯುತ್ತಿವೆ ಎಂದು ಅಧಿವೇಶನದಲ್ಲಿ ಹೇಳಿದ್ದಾರೆ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಬೇರೆ ರಾಜ್ಯಗಳ ಬದಲು ತಮ್ಮ ಸ್ವಂತ ರಾಜ್ಯಗಳಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯದ ಬಗ್ಗೆ ಗಮನಹರಿಸಬೇಕು ಎಂದಿದ್ದರು.
ತನ್ನ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಗುಧಾ, ಸತ್ಯ ಮಾತನಾಡಿದ್ದಕ್ಕೆ ಶಿಕ್ಷೆಯಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.