ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾಗಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಮದನ್ ದಾಸ್ ದೇವಿ (81 ವರ್ಷಗಳು) ಇಂದು ಮುಂಜಾನೆ 5.00 ಗಂಟೆಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಇಂದು ಸೋಮವಾರ, ಜುಲೈ 24ರಂದು ಮಧ್ಯಾಹ್ನ 1.30ರಿಂದ 4.00ರ ತನಕ ಬೆಂಗಳೂರಿನ ಕೇಶವಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಯು ನಾಳೆ, ಮಂಗಳವಾರ ಜುಲೈ 25ರಂದು ಮಹಾರಾಷ್ಟ್ರದ ಪುಣೆಯಲ್ಲಿ ಜರುಗಲಿದೆ.
ಮದನ್ ದಾಸ್ ಅವರ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ಮದನ್ ದಾಸ್ ಅವರ ಅಗಲುವಿಕೆಯ ಸುದ್ದಿ ತಿಳಿದು ಅಪಾರ ನೋವುಂಟಾಗಿದೆ. ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರ ಸೇವೆಗೆ ಮುಡುಪಾಗಿಟ್ಟಿದ್ದರು. ಅವರಿಂದ ನಾನು ಸಾಕಷ್ಟನ್ನು ಕಲಿತಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದಿದ್ದಾರೆ.
श्री मदन दास देवी जी के देहावसान से अत्यंत दुख हुआ है। उन्होंने अपना पूरा जीवन राष्ट्रसेवा में समर्पित कर दिया। उनसे मेरा न सिर्फ घनिष्ठ जुड़ाव रहा, बल्कि हमेशा बहुत कुछ सीखने को मिला। शोक की इस घड़ी में ईश्वर सभी कार्यकर्ताओं और उनके परिवारजनों को संबल प्रदान करे। ओम शांति!
— Narendra Modi (@narendramodi) July 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.