ಅಹ್ಮದಾಬಾದ್: ಪಟೇಲರ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿರುವ ಹಾರ್ದಿಕ್ ಪಟೇಲ್ನ ಅಪಹರಣ ಹೇಳಿಕೆಯ ಬಗ್ಗೆ ಗುಜರಾತ್ ಹೈಕೋರ್ಟ್ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ನ್ಯಾಯಾಲಯದ ಕಲಾಪವನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ, ನ್ಯಾಯಾಂಗ ನಿಂದನೆ ಮಾಡುತ್ತಿದ್ದೀರಿ ಎಂದು ಆತನಿಗೂ ಮತ್ತು ಆತನ ವಕೀಲರಿಗೆ ಎಚ್ಚರಿಕೆ ನೀಡಿದೆ.
‘ಹಾರ್ದಿಕ್ ಮತ್ತು ಆತನ ವಕೀಲರು ಮಾಡಿರುವ ಅಪಹರಣದ ಆರೋಪ ಮೇಲ್ನೋಟಕ್ಕೆ ಸಮಧಾನಕರವಾಗಿಲ್ಲ. ನ್ಯಾಯಾಲಯದ ಕಲಾಪವನ್ನು ದುರುಪಯೋಗ ಮಾಡಿಕೊಳ್ಳುವುದು ಒಳ್ಳೆಯದಲ್ಲ, ಅದಕ್ಕೆ ಆಸ್ಪದವೂ ಇಲ’ ಎಂದು ನ್ಯಾಯಮೂರ್ತಿಗಳಾದ ಎಂ.ಆರ್ ಶಾ ಮತ್ತು ಕೆ.ಜೆ.ಥಾಕೆರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ.
ಹಾರ್ದಿಕ್ ಪಟೇಲ್ ನಾಪತ್ತೆಯಾಗಿದ್ದಾರೆ ಎಂದು ನ್ಯಾಯಾಲಯವನ್ನು ನಂಬಿಸಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತಹ ವಾತಾವರಣವನ್ನು ಅವರ ವಕೀಲರು ನಿರ್ಮಿಸಿದ್ದರು. ಅಲ್ಲದೇ ಬಳಿಕ ಆತ ಪತ್ತೆಯಾದಾಗ ಆ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸುವ ಸೌಜನ್ಯವನ್ನೂ ತೋರಿಸಿಲ್ಲ. ಆದರೆ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಡೀ ಘಟನೆಯ ಬಗ್ಗೆ ವಿವರಣೆ ನೀಡುವಂತೆ ನ್ಯಾಯಾಲಯ ಪಟೇಲ್ಗೆ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.೨೯ಕ್ಕೆ ಮುಂದೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.