ನವದೆಹಲಿ: ಭಾರತೀಯ ಸೇನೆಯ ಸೈನಿಕರ ತ್ಯಾಗವನ್ನು ಸ್ಮರಿಸುತ್ತಾ ರಾಷ್ಟ್ರವು ಇಂದು ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸುತ್ತಿದೆ. ದೇಶವು 1999 ರಲ್ಲಿ ಕಾರ್ಗಿಲ್ನಲ್ಲಿ 60 ದಿನಗಳ ಯುದ್ಧದ ನಂತರ ಪಾಕಿಸ್ತಾನಿ ಪಡೆಗಳ ಮೇಲೆ ಸಾಧಿಸಿದ ವಿಜಯವನ್ನು ಈ ದಿನವು ಸ್ಮರಿಸುತ್ತದೆ.
ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ಮೂರು ಸೇವಾ ಮುಖ್ಯಸ್ಥರು, ಇತರ ಉನ್ನತ ಸೇನಾ ಕಮಾಂಡರ್ಗಳು ಮತ್ತು ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ.ಡಿ ಮಿಶ್ರಾ ಅವರು ದ್ರಾಸ್ನಲ್ಲಿ ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಸಶಸ್ತ್ರ ಪಡೆಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಅವರ ಅಸಾಧಾರಣ ಶೌರ್ಯ ಮತ್ತು ಸಾಧಿಸಿದ ವಿಜಯವನ್ನು ಗುರುತಿಸಿ ಶ್ಲಾಘಿಸಿದ್ದಾರೆ. ಸಂದೇಶದಲ್ಲಿ ದೇಶ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರನ್ನು ಸ್ಮರಿಸಿ ಗೌರವಿಸಿದ್ದಾರೆ. ಅವರ ವೀರಗಾಥೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿವೆ ಎಂದು ರಾಷ್ಟ್ರಪತಿ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಭಾರತದ ವೀರರಿಗೆ ಗೌರವ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ಯೋಧರ ವೀರಗಾಥೆಯನ್ನು ಶ್ಲಾಘಿಸಿದರು ಮತ್ತು ಅವರು ರಾಷ್ಟ್ರಕ್ಕೆ ಶಾಶ್ವತ ಸ್ಫೂರ್ತಿ ಎಂದು ಬಣ್ಣಿಸಿದರು. ಸೈನಿಕರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.
आज कारगिल विजय दिवस के गौरवशाली अवसर पर सभी देशवासी हमारे सशस्त्र बलों के असाधारण पराक्रम से अर्जित की गई विजय को याद करते हैं। देश की रक्षा के लिए अपने जीवन का बलिदान करके विजय का मार्ग प्रशस्त करने वाले सेनानियों को एक कृतज्ञ राष्ट्र की ओर से मैं श्रद्धांजलि देती हूं और उनकी…
— President of India (@rashtrapatibhvn) July 26, 2023
कारगिल विजय दिवस भारत के उन अद्भुत पराक्रमियों की शौर्यगाथा को सामने लाता है, जो देशवासियों के लिए सदैव प्रेरणाशक्ति बने रहेंगे। इस विशेष दिवस पर मैं उनका हृदय से नमन और वंदन करता हूं। जय हिंद!
— Narendra Modi (@narendramodi) July 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.