ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ.
ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕಾಲೇಜು ನಿರ್ದೇಶಕಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮೂವರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ತಕ್ಷಣವೇ ಅಮಾನತು ಮಾಡಿದ್ದೇವೆ.
ಸಂತ್ರಸ್ತ ಯುವತಿ ದೂರು ಕೊಡಲು ಒಪ್ಪಿಕೊಂಡಿಲ್ಲ, ಭವಿಷ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ ಆಕೆ ದೂರ ನೀಡಲು ಮುಂದಾಗಿಲ್ಲ ಎಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಆಕ್ರೋಶಗಳು ವ್ಯಕ್ತವಾದ ತರುವಾಯ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
Udupi Video Incident | Udupi Police has filed two cases. One case linked to three female students and college administration regarding deletion of a video of a student filmed in the toilet. Second case linked to uploading of a hidden camera video on YouTube channels. #Karnataka pic.twitter.com/i9JWGmNOHO
— ANI (@ANI) July 26, 2023
#WATCH | Udupi Video Incident | Former Karnataka CM and BJP leader Basavaraj Bommai says, "…Police is not taking any action…They wanted to take action against the girl who raised an alarm, the whistleblower rather than the culprits. After a hue and cry, they have lodged an… pic.twitter.com/8433MLqn6B
— ANI (@ANI) July 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.