ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬಿಗಿಪಟ್ಟು ಹಿಡಿದು ಅವಿಶ್ವಾಸ ನಿರ್ಣಯ ಮಂಡನೆ ಮಾಡಿರುವ ಪ್ರತಿಪಕ್ಷಗಳ ನಿರ್ಧಾರದ ನಡುವೆಯೇ 2019ರಲ್ಲಿ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಭಾಷಣ ವೈರಲ್ ಆಗುತ್ತಿದೆ.
2019ರ ಫೆಬ್ರುವರಿ 7ರಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರು ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ಕುರಿತು ಮಾತನಾಡುತ್ತಾ, ಪ್ರತಿಪಕ್ಷಗಳಿಗೆ 2023ರಲ್ಲಿಯೂ ಬಿಜೆಪಿ ಸರ್ಕಾರದ ವಿರುದ್ಧ ಇದೇ ರೀತಿ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಅವಕಾಶ ನೀಡಲಿ ಎಂದು ಕೇಳಿಕೊಳ್ಳುವುದಾಗಿ ಹೇಳಿದ್ದರು.
2019ರಲ್ಲಿ ವಿಪಕ್ಷಗಳು ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ವೇಳೆ ಅಂದು ಎನ್ ಡಿಎ ಮೈತ್ರಿಕೂಟ 195 ಮತಗಳಿಂದ ಗೆಲುವು ಕಂಡಿತ್ತು. ಒಟ್ಟು 330 ಸಂಸದರು ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದ್ದರು.
ಮೋದಿಯವರ ಕೋರಿಕೆ ಅಕ್ಷರಶಃ ಸತ್ಯವಾಗುತ್ತಿದೆ. 2023ರಲ್ಲಿ ಮತ್ತೆ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿವೆ.
VIDEO: PM Sh @narendramodi had made a prediction 5 years back about the opposition bringing a No confidence motion! pic.twitter.com/dz8McicQ40
— Dr Jitendra Singh (@DrJitendraSingh) July 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.