ನವದೆಹಲಿ: ಆರ್ಟಿಕಲ್ 370 ಮತ್ತು 35ಎ ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ತನ್ನ ಮೊದಲ ಪಂಚಾಯತ್ ಚುನಾವಣೆಗೆ ಸಾಕ್ಷಿಯಾಗಲು ಸಿದ್ಧವಾಗಿದೆ. ಅಕ್ಟೋಬರ್-ನವೆಂಬರ್ ನಲ್ಲಿ ಚುನಾವಣೆ ನಡೆಯಲಿದ್ದು, ಪಕ್ಷಾತೀತವಾಗಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬ್ರಜ್ ರಾಜ್ ಶರ್ಮಾ ಮಾಹಿತಿ ನೀಡಿದ್ದಾರೆ.
ಮಾಜಿ ಮುಖ್ಯ ಕಾರ್ಯದರ್ಶಿ ಬ್ರಜ್ ರಾಜ್ ಶರ್ಮಾ ಅವರು ಜುಲೈ 21 ರಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯ ಚುನಾವಣಾ ಆಯುಕ್ತರಾಗಿ (ಎಸ್ಇಸಿ) ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವದ ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡುವ ಪ್ರಕ್ರಿಯೆಯನ್ನು ಅವರು ಆರಂಭಿಸಿದ್ದಾರೆ.
ಜುಲೈ 14 ರಂದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರ ಪಂಚಾಯತ್ ರಾಜ್ ಕಾಯಿದೆ, 1989 ರ ಸೆಕ್ಷನ್ 36 ರ ಉಪ-ವಿಭಾಗ (3) ರ ನಿಬಂಧನೆಯಿಂದ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಶರ್ಮಾ ಅವರನ್ನು ಹೊಸ ರಾಜ್ಯ ಚುನಾವಣಾ ಆಯುಕ್ತರಾಗಿ (SEC) ನೇಮಿಸಿದರು. ಮತ್ತು 65 ವರ್ಷ ವಯಸ್ಸಿನವರೆಗೆ ರಾಜ್ಯ ಚುನಾವಣಾ ಆಯುಕ್ತರ ಹುದ್ದೆಯಲ್ಲಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.