ನವದೆಹಲಿ: ಕ್ಷೇತ್ರಾಭಿವೃದ್ಧಿಗೆ ಶಾಸಕರಿಗೆ ಅನುದಾನವನ್ನು ಒದಗಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಈ ವರ್ಷ ಅಭಿವೃದ್ಧಿಗೆ ಹಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಭಾರೀ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ.
ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಕೋರಿಕೆಯಂತೆ (ಸರ್ಕಾರಿ ನೌಕರರ) ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಸಚಿವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಗ್ಯಾರಂಟಿಗಳ ಕಾರಣದಿಂದ ರಾಜ್ಯದ ಅಭಿವೃದ್ಧಿ ನೆನೆಗುದಿಗೆ ಬೀಳಲಿದೆ ಎಂಬುದನ್ನು ಸರ್ಕಾರ ನೇರವಾಗಿಯೇ ಹೇಳಿದೆ.
ಕೆಲವು ವಿಷಯಗಳನ್ನು ಚರ್ಚಿಸಲು ಶಾಸಕರು ಪಕ್ಷದ ಸಭೆ ನಡೆಸುವಂತೆ ಕೇಳಿದ್ದಾರೆ ಎಂದ ಡಿಕೆಶಿ, ನಾವು ಕೂಡ ಕೆಲವು ಹಣಕಾಸಿನ ವಿಷಯಗಳ ಬಗ್ಗೆ ಚರ್ಚಿಸಲು ಬಯಸುತ್ತೇವೆ. ಏಕೆಂದರೆ ನಾವು 40,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಶಿವಕುಮಾರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.