ನವದೆಹಲಿ: ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಕಾರ, ಭಾರತವು ಭವಿಷ್ಯದಲ್ಲಿ ಒಲಿಂಪಿಕ್ಸ್ ಅನ್ನು ಆಯೋಜಿಸುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಹೊಂದಿದೆ, ಪ್ರಮುಖ ಕ್ರೀಡಾ ಸೂಪರ್ ಪವರ್ ಆಗಿ ತನ್ನನ್ನು ತಾನು ಸ್ಥಾಪಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ವಿವಿಧ ವಿಭಾಗಗಳಲ್ಲಿ ಉತ್ತಮ ಗುಣಮಟ್ಟದ ಪಂದ್ಯಾವಳಿಗಳನ್ನು ಆಯೋಜಿಸುವುದು ಈ ಗುರಿಯನ್ನು ಸಾಧಿಸಲು ಕೊಡುಗೆ ನೀಡುತ್ತದೆ ಎಂದು ಠಾಕೂರ್ ಒತ್ತಿ ಹೇಳಿದರು.
2026 ರ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಭಾರತದ ಸಂಭಾವ್ಯ ಆಸಕ್ತಿಯ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಯನ್ನು ನೀಡಿದ್ದಾರೆ, ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು ಹೆಚ್ಚುತ್ತಿರುವ ವೆಚ್ಚಗಳಿಂದಾಗಿ ಕ್ರೀಡಾಕೂಟ ಆಯೋಜನೆಯಿಂದ ಹಿಂದೆ ಸರಿದ ನಂತರ ಭಾರತ ಆಯೋಜನೆಗೆ ಆಸಕ್ತಿ ತೋರಿಸುತ್ತಿದೆ. ಠಾಕೂರ್ ಅವರು 2026 ರ CWG ಗಾಗಿ ನಿರ್ದಿಷ್ಟ ಯೋಜನೆಗಳ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ ಆದರೆ ಸರಿಯಾದ ಸಮಯದಲ್ಲಿ ಒಲಿಂಪಿಕ್ಸ್ ಅನ್ನು ಆಯೋಜಿಸುವ ಸಾಧ್ಯತೆಯ ಕಡೆಗೆ ಭಾರತವು ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ಠಾಕೂರ್ ಅವರು ಭಾರತದ ಕ್ರೀಡಾ ಅಭಿವೃದ್ಧಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದು, ಕ್ರೀಡಾಪಟುಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಮತ್ತು ಕ್ರೀಡಾ ಒಕ್ಕೂಟಗಳು ಹೆಚ್ಚು ಜವಾಬ್ದಾರಿಯುತ ಮತ್ತು ವೃತ್ತಿಪರವಾಗಿವೆ ಎಂದಿದ್ದಾರೆ. ಅಲ್ಲದೇ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಂತಹ ಅಂಶಗಳನ್ನು ಅವರು ಕ್ರೀಡಾ ಕ್ಷೇತ್ರದಲ್ಲಿ ಭಾರತದ ಪ್ರಗತಿಗೆ ಕೊಡುಗೆ ನೀಡುವ ನಿರ್ಣಾಯಕ ಅಂಶಗಳಾಗಿ ಎಂದು ಉಲ್ಲೇಖಿಸಿದ್ದಾರೆ.
#WATCH | Noida: India wants to organise the Olympics and we will hold it grandly. We are working on that path. We are bringing several changes also in our federation: Union Sports Minister Anurag Thakur pic.twitter.com/7M8IoPvxO1
— ANI (@ANI) July 27, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.