ನವದೆಹಲಿ: ಜುಲೈನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ಶೇ.11 ರಷ್ಟು ಏರಿಕೆಯಾಗಿ 1.65 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಜಿಎಸ್ಟಿ ಅನುಷ್ಠಾನಗೊಂಡ ನಂತರ ಐದನೇ ಬಾರಿಗೆ ಸಂಗ್ರಹ ರೂ.1.6 ಲಕ್ಷ ಕೋಟಿಯ ಗಡಿ ದಾಟಿದೆ.
ಕಳೆದ ತಿಂಗಳು ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆದಾಯ 1,65,105 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್ಟಿ ರೂ.29,773 ಕೋಟಿ, ಎಸ್ಜಿಎಸ್ಟಿ ರೂ.37,623 ಕೋಟಿ, ಐಜಿಎಸ್ಟಿ ರೂ. 85,930 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ.41,239 ಕೋಟಿ ಸೇರಿದಂತೆ) ಮತ್ತು 11,779 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ ರೂ 840 ಕೋಟಿ ಸೇರಿದಂತೆ) ಆಗಿದೆ.
ಕಳೆದ ವರ್ಷದ ಇದೇ ತಿಂಗಳ ಜಿಎಸ್ಟಿ ಆದಾಯಕ್ಕಿಂತ ಈ ತಿಂಗಳ ಆದಾಯವು ಶೇಕಡಾ 11 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ತಿಂಗಳ ಅವಧಿಯಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಕಳೆದ ವರ್ಷದ ಇದೇ ತಿಂಗಳ ಅವಧಿಯಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ 15 ಪ್ರತಿಶತ ಹೆಚ್ಚಾಗಿದೆ.
ಇದು ಐದನೇ ಬಾರಿಗೆ ಒಟ್ಟು ಜಿಎಸ್ಟಿ ಸಂಗ್ರಹವು 1.60 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ ಎಂದು ಸಚಿವಾಲಯ ತಿಳಿಸಿದೆ.
ಜೂನ್ ತಿಂಗಳಿನಲ್ಲಿನ ಜಿಎಸ್ಟಿ ಸಂಗ್ರಹ 1,61,497 ಕೋಟಿ ರೂ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.