ಮಂಗಳೂರು : ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯ ಮೂಲಕ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುತಿಸಿಕೊಳ್ಳಬೇಕು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಕರೆ ನೀಡಿದರು.
ಮಂಗಳೂರು ನಗರ ಬಿಜೆಪಿ ದಕ್ಷಿಣ ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಜರಗಿದ ಪಂಡಿತ್ ದೀನದಯಾಳ್ ಉಪಾದ್ಯಾಯ ಅವರ 99 ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ದೀನದಯಾಳ್ ಉಪಾಧ್ಯಾಯರು ತ್ಯಾಗ ಉದಾತ್ತ ಧ್ಯೇಯಗಳ ಮೂಲಕ ಪಕ್ಷ ಸಂಘಟನೆ ಮಾಡಿದ್ದಾರೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ಅವರ ವಿಚಾರಶೀಲ ಪ್ರೇರಣಾರೂಪವನ್ನಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಇತರ ಪಕ್ಷಗಳಿಗಿಂತ ಭಿನ್ನವಾಗಿ ಸಾಗಬೇಕು ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿ ಅಧ್ಯಕ್ಷ ರವಿಶಂಕರ್ ಮಿಜಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ನಿತಿನ್ಕುಮಾರ್ , ಮಂಗಳೂರು ಪಾಲಿಕೆ ವಿಪಕ್ಷ ನಾಯಕ ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.