ಮಂಗಳೂರು: ಆಗಸ್ಟ್ 6ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅರವರನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಅಭಿನಂದಿಸಿದಾರೆ.
ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.