ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿಯ ಕಲಾಕೃತಿಯನ್ನು ಉಡುಗೊರೆ ನೀಡಿ ಸನ್ಮಾನಿಸಿದರು.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು. ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.
ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.
Met @PMOIndia Shri @narendramodi at Sansad Bhavan in New Delhi today and discussed about various issues. pic.twitter.com/yjdRq96N3s
— Siddaramaiah (@siddaramaiah) August 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.