ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಮೈಸೂರು ದಸರಾ ರಾಜ್ಯದ ಗತವೈಭವ ಮತ್ತು ಇತಿಹಾಸವನ್ನು ಸಾರುವ ಹಬ್ಬವಾಗಿದೆ. ಇದನ್ನು ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಅಚರಿಸಲು ನಿರ್ಧರಿಸಿದೆ ಎಂದರು.
2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಸಂತಸಪಟ್ಟಿದ್ದರು. ಈ ವರ್ಷವೂ ವಾಯುಪಡೆಗಳಿಂದ ವಿಶೇಷ ಏರ್ ಶೋ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ರಾಮನಾಥ್ ಸಿಂಗ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು ಎಂದು ವರದಿಗಳು ತಿಳಿಸಿವೆ.
Met @DefenceMinIndia Shri @rajnathsingh in New Delhi today and requested him to organise Air Show during Dasara festival. pic.twitter.com/zjCNUOGuwp
— Siddaramaiah (@siddaramaiah) August 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.