ನವದೆಹಲಿ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತದೊಂದಿಗೆ ಮಾತುಕತೆ ನಡೆಸುವ ಇಚ್ಛೆಯನ್ನು ಕೆಲ ದಿನಗಳ ಹಿಂದೆ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದು, ಭಾರತವು ಪಾಕಿಸ್ತಾನದೊಂದಿಗೆ ನೆರೆಯ ಸಂಬಂಧವನ್ನು ಬಯಸುತ್ತದೆ ಆದರೆ ಅಂತಹ ಪರಿಸ್ಥಿತಿಗಾಗಿ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತ ವಾತಾವರಣ ಇರಬೇಕು ಎಂದು ಹೇಳಿದ್ದಾರೆ.
ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಗ್ಚಿ, “ಮಾತುಕತೆ ಕುರಿತ ಪಾಕಿಸ್ತಾನದ ಪ್ರಧಾನಿಯವರ ಕಾಮೆಂಟ್ಗಳ ವರದಿಗಳನ್ನು ನಾವು ನೋಡಿದ್ದೇವೆ. ನಾವು ಪಾಕಿಸ್ತಾನ ಸೇರಿದಂತೆ ನಮ್ಮ ಎಲ್ಲಾ ನೆರೆಯ ದೇಶಗಳೊಂದಿಗೆ ಸಾಮಾನ್ಯ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ಸ್ಪಷ್ಟ ಮತ್ತು ಸ್ಥಿರವಾದ ನಿಲುವು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಅದಕ್ಕೆ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾಗಿರುವುದು ಅತ್ಯಗತ್ಯ” ಎಂದಿದ್ದಾರೆ.
ಇದಕ್ಕೂ ಮುನ್ನ, ಮಂಗಳವಾರ, ಪಾಕಿಸ್ತಾನದ ಪ್ರಧಾನಿ ಭಾರತದೊಂದಿಗೆ ಮಾತನಾಡಲು ಇಚ್ಛೆಯನ್ನು ವ್ಯಕ್ತಪಡಿಸಿದರು ಮತ್ತು ಯಾರ ವಿರುದ್ಧವೂ ಇಲ್ಲ ಎಂದು ಒತ್ತಿ ಹೇಳಿದರು.
ಇಸ್ಲಾಮಾಬಾದ್ನಲ್ಲಿ ನಡೆದ ಖನಿಜ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶೆಹಬಾಜ್ ಷರೀಫ್, ರಾಷ್ಟ್ರವನ್ನು ನಿರ್ಮಿಸಲು ನಾವು ನೆರೆಹೊರೆಯವರೊಂದಿಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.