ನವದೆಹಲಿ: 5 ನೇ ಆಗಸ್ಟ್ 370 ನೇ ವಿಧಿಯ ರದ್ದತಿಯ ನಾಲ್ಕನೇ ವಾರ್ಷಿಕೋತ್ಸವವಾಗಿದೆ. ಆಗಸ್ಟ್, 2019 ರಲ್ಲಿ ಇದೇ ದಿನ, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿತು. ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂದಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.
ಈ ಹಿಂದೆ, ಜಮ್ಮು ಮತ್ತು ಕಾಶ್ಮೀರವು 370 ನೇ ವಿಧಿಯಲ್ಲಿ ಉಲ್ಲೇಖಿಸಲಾದ ನಿಬಂಧನೆಗಳ ಪ್ರಕಾರ ಪ್ರತ್ಯೇಕ ಸಂವಿಧಾನವನ್ನು ಹೊಂದಿರುವ ದೇಶದ ಏಕೈಕ ರಾಜ್ಯವಾಗಿತ್ತು, ಇದು ರಾಜ್ಯಕ್ಕೆ ವಿಶೇಷ ಸ್ವಾಯತ್ತ ಸ್ಥಾನಮಾನವನ್ನು ನೀಡುವ ‘ತಾತ್ಕಾಲಿಕ ನಿಬಂಧನೆ’ಯಾಗಿತ್ತು. ಆರ್ಟಿಕಲ್ 370 ರ ರದ್ಧತಿಯ ನಂತರ, ಎಲ್ಲಾ ಕೇಂದ್ರ ಕಾನೂನುಗಳು ಮತ್ತು ವಿವಿಧ ಕಲ್ಯಾಣ ಯೋಜನೆಗಳು ಅಲ್ಲಿ ಅನ್ವಯಿಸುತ್ತವೆ. ಈ ನಿರ್ಧಾರವು ಈ ಪ್ರದೇಶದಲ್ಲಿ ಹೂಡಿಕೆಯನ್ನು ಆಕರ್ಷಿಸಲು ದಾರಿ ಮಾಡಿಕೊಟ್ಟಿದೆ ಮತ್ತು ಅದು ಅಭಿವೃದ್ಧಿಯನ್ನು ತಂದಿದೆ.
ಆರ್ಟಿಕಲ್ 370 ರದ್ದತಿಯಿಂದ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಉದ್ಯೋಗ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಭಯೋತ್ಪಾದಕರ ಹಾಟ್ಸ್ಪಾಟ್ನಿಂದ ಪ್ರವಾಸಿ ಹಾಟ್ಸ್ಪಾಟ್ಗೆ ಜಮ್ಮು ಮತ್ತು ಕಾಶ್ಮೀರದ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ರೆಡ್ಡಿ, ಜಿ 20 ಸಭೆಗಳನ್ನು ಆಯೋಜಿಸುವುದರಿಂದ ಹಿಡಿದು ಪ್ರವಾಸಿಗರ ಹೆಜ್ಜೆಯನ್ನು ದಾಖಲಿಸುವವರೆಗೆ, ಜಮ್ಮು ಮತ್ತು ಕಾಶ್ಮೀರವು ಶಾಂತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಬಹಳ ದೂರ ಸಾಗಿದೆ. ಒಂದು ರಾಷ್ಟ್ರ, ಒಂದು ಸಂವಿಧಾನ ಎಂಬ ಭರವಸೆಯನ್ನು ಈಡೇರಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ಕಠಿಣ ಸಂಕಲ್ಪವಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.