ನವದೆಹಲಿ: ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ.
ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗುಂಡಿನ ಚಕಮಕಿ ನಡೆದಿದೆ. ಸೇನೆಯ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ. ಅವರ ದೇಹಗಳು ಇನ್ನೂ ಪತ್ತೆಯಾಗಿಲ್ಲ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಇನ್ನೊಂದೆಡೆ ಕುಪ್ವಾರ ಪೊಲೀಸರು ಮತ್ತು ಭಾರತೀಯ ಸೇನೆಯು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರದ ತಂಗ್ಧರ್ ಸೆಕ್ಟರ್ನಲ್ಲಿ ಭಯೋತ್ಪಾದಕ ಹತ್ಯೆಯಾಗಿದ್ದಾನೆ. ಭಯೋತ್ಪಾದಕ ಭಾರತದ ಪ್ರದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕನಿಂದ ಅಪಾರ ಪ್ರಮಾಣದ ಅಕ್ರಮ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
Army & Kupwara police in a joint #operation foiled an #infilitration bid by neutralising a #terrorist on #LoC in Amrohi area of #Tangdhar Sector. Incriminating materials, arms & ammunition recovered. Search operation in progress. Further details shall follow.@JmuKmrPolice
— Kashmir Zone Police (@KashmirPolice) August 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.