ನವದೆಹಲಿ: ಭಾರತದ ಚಂದ್ರಯಾನ-3 ನೌಕೆ ಚಂದ್ರನನ್ನು ಸಮೀಪಿಸಿದೆ. ಬಾಹ್ಯಾಕಾಶದಲ್ಲಿ ಮೂರು ಲಕ್ಷಕ್ಕೂ ಅಧಿಕ ದೂರ ಕ್ರಮಿಸಿದ ನಂತರ ಚಂದ್ರಯಾನ-3 ಗಗನ ನೌಕೆಯು ಶನಿವಾರ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಸೇರಿದೆ. ಈ ಕುರಿತು ಗಗನನೌಕೆ ಸೆರೆಹಿಡಿದಿರುವ ಚಂದ್ರನ ಹೊರ ವಿಡಿಯೋವನ್ನು ಚಂದ್ರಯಾನ-3 ಟ್ವಿಟರ್ ಹ್ಯಾಂಡಲ್ ಹಂಚಿಕೊಂಡಿದೆ.
ಚಂದ್ರನಲ್ಲಿ ಇಳಿಯುವ ಮೊದಲು ಚಂದ್ರನ ಕಕ್ಷೆಯ ಮೂಲಕ ಈ ವಿಡಿಯೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಂದ್ರನ ಮೇಲೆ ಈ ನೌಕೆ ಇಳಿಯಲು ಇನ್ನು 4000 km ಇದೆ ಎಂದು ತಿಳಿದು ಬಂದಿದೆ. ಮುಂದಿನ 18 ದಿನಗಳ ಅವಧಿಯಲ್ಲಿ ಚಂದ್ರಯಾನ3 ನೌಕೆಯ ವೇಗವನ್ನು ನಿಧಾನವಾಗಿ ಕಡಿಮೆ ಮಾಡಿ ಅದನ್ನು ಚಂದ್ರನಿಂದ 100 ಕಿಮೀ ಅಂತರದ ಕೆಳಗೆ ಕಕ್ಷೆಗೆ ತರಲಾಗುತ್ತದೆ. ನಂತರ ಆಗಸ್ಟ್ 23ರ ಸಂಜೆ ಚಂದಿರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.
ಚಂದ್ರಯಾನ-3 ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯವನ್ನು ಬೆಂಗಳೂರಿನಲ್ಲಿರುವ ಇಸ್ರೋ ಟೆಲೆಮೆಟ್ರಿ ಟ್ರಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ.
The Moon, as viewed by #Chandrayaan3 spacecraft during Lunar Orbit Insertion (LOI) on August 5, 2023.#ISRO pic.twitter.com/xQtVyLTu0c
— LVM3-M4/CHANDRAYAAN-3 MISSION (@chandrayaan_3) August 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.