ನವದೆಹಲಿ: ಇಂದು ರಾಷ್ಟ್ರೀಯ ಕೈಮಗ್ಗ ದಿನ. ಭಾರತದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಉಳಿಸಲು ಮತ್ತು ಅದರ ಪ್ರಮುಖ್ಯತೆಯನ್ನು ಜನರಿಗೆ ತಿಳಿಸಲು ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. 1905,
ಆಗಸ್ಟ್ 7 ರಂದು ಆರಂಭವಾದ ಸ್ವದೇಶಿ ಚಳುವಳಿಯ ಗೌರವಾರ್ಥ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯ ಕೈಮಗ್ಗ ನೇಕಾರರು ಪ್ರಮುಖ ಪಾತ್ರ ವಹಿಸಿದ್ದರು. ಬ್ರಿಟೀಷರ ಹಾಗೂ ವಿದೇಶಿ ಉತ್ಪನ್ನಗಳನ್ನು ನಿಷೇಧಿಸಿ ಸ್ಥಳೀಯ ಕೈಗಾರಿಕೆಗಳನ್ನು ಉತ್ತೇಜಿಸಲು ಮತ್ತು ಜನರಲ್ಲಿ ಸ್ವದೇಶಿ ಉತ್ಪನ್ನಗಳ ಭಾವನೆಗಳನ್ನು ಜಾಗೃತಗೊಳಿಸಲು ಈ ಚಳುವಳಿಯನ್ನು ಪ್ರಾರಂಭಿಸಲಾಯಿತು. ಇದರ ಗೌರವಾರ್ಥವಾಗಿ ಮೊದಲ ಬಾರಿಗೆ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಗಸ್ಟ್ 7, 2015 ರಂದು ಆಚರಿಸಲಾಯಿತು. ನಂತರದಲ್ಲಿ ಪ್ರತಿವರ್ಷ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಉತ್ತೇಜಿಸುವುದು. ಹಾಗೂ ನೇಕಾರರ ಸಮುದಾಯವನ್ನು ಗೌರವಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಗುರುತಿಲು ಕೈಮಗ್ಗದ ದಿನವನ್ನು ಆಚರಿಸುವುದರ ಹಿಂದಿನ ಮುಖ್ಯ ಉದ್ದೇಶವಾಗಿದೆ. ಮೋದಿ ಸರ್ಕಾರವು ಕೈಮಗ್ಗವನ್ನು ಪ್ರೋತ್ಸಾಹಿಸಿ ನೇಕಾರರ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಕೈಮಗ್ಗ ದಿನದ ಪ್ರಯುಕ್ತ ದೆಹಲಿಯ ಭಾರತ್ ಮಂಡಪ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.