ಚಿಕ್ಕಮಗಳೂರು: ಯಾವುದೇ ಕ್ರಿಶ್ಚಿಯನ್ ಮನೆಗಳಿಲ್ಲದ ಹಳ್ಳಿಯಲ್ಲಿ ಮಿಷನರಿಗಳು ಚರ್ಚ್ ನಿರ್ಮಾಣ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಹಳ್ಳಿಯೊಂದರಲ್ಲಿ ಬೆಂಕಿಗೆ ಬಂದಿದೆ. ಮತಾಂತರದ ಉದ್ದೇಶ ಇಟ್ಟುಕೊಂಡೇ ಇದನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಅಂಶಯ ವ್ಯಕ್ತಪಡಿಸಿದ್ದಾರೆ.
ಚರ್ಚ್ ನಿರ್ಮಾಣ ಈಗಾಗಲೇ ವಿವಾದವನ್ನು ಹುಟ್ಟುಹಾಕಿದೆ, ಹಿಂದೂ ಸಂಘಟನೆಗಳು ಮತ್ತು ಗ್ರಾಮಸ್ಥರು ಕ್ರಿಶ್ಚಿಯನ್ ಮನೆಗಳಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣವನ್ನು ವಿರೋಧಿಸಿದ್ದಾರೆ. ಮೊದಲು ಮನೆ ನಿರ್ಮಾಣಕ್ಕೆ ಅನುಮತಿ ತೆಗೆದುಕೊಂಡು ಬಳಿಕ ಚರ್ಚ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣವಾಗುತ್ತಿದೆ. ಗ್ರಾಮದಲ್ಲಿ ಕ್ರಿಶ್ಚಿಯನ್ ಕುಟುಂಬಗಳಿಲ್ಲದ ಕಾರಣ ಚರ್ಚ್ ನಿರ್ಮಾಣ ಮಾಡಬಾರದು ಎಂದು ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಧಾರ್ಮಿಕ ಮತಾಂತರಕ್ಕೆ ಚರ್ಚ್ ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೂಡಿಗೆರೆ ಸಮೀಪದ ಹಾಂಡಿ ಗ್ರಾಮದ ಒಬ್ಬರ ಜಮೀನಿನಲ್ಲಿ ಚರ್ಚ್ ನಿರ್ಮಾಣವಾಗಿದೆ.
ಈ ಬಗ್ಗೆ ಪೊಲೀಸರು ಇನ್ನೂ ಪ್ರತಿಕ್ರಿಯಿಸಿಲ್ಲ. ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಕೋಮು ಸೂಕ್ಷ್ಮ ಪ್ರದೇಶವಾದ ಚಿಕ್ಕಮಗಳೂರಿನಲ್ಲಿ ಈ ಬೆಳವಣಿಗೆ ಆತಂಕ ಮೂಡಿಸಿದೆ.
Hindu Organisations stop construction of a #Church in Mudigere, #Chikkamagalur district of #Karnataka. They allege permission was taken for construction of a house. Instead the church is being built for forcible conversion. pic.twitter.com/24qtU86VVf
— Imran Khan (@KeypadGuerilla) August 7, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.