ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶಿಕ್ಷೆ ವಿಧಿಸಿದ ನಂತರ, ಪಾಕಿಸ್ತಾನದ ಚುನಾವಣಾ ಆಯೋಗವು ಇದೀಗ ಅವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಆಯೋಗವು ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಿದೆ.
ಇಸ್ಲಾಮಾಬಾದ್ನ ವಿಚಾರಣಾ ನ್ಯಾಯಾಲಯವು ಕಳೆದ ವಾರವಷ್ಟೇ ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ಖಾನ್ನನ್ನು ತಪ್ಪಿತಸ್ಥನೆಂದು ಪರಿಗಣಿಸಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದಿಂದ ಶಿಕ್ಷೆಯಾದ ಕೂಡಲೇ ಅವರನ್ನು ಬಂಧಿಸಲಾಯಿತು.
ಈ ನಡುವೆ, ಇಮ್ರಾನ್ ಅವರನ್ನು ಜೈಲಿನಲ್ಲಿ ಸಿ ದರ್ಜೆ ಕೈದಿಯಂತೆ ನೋಡಿಕೊಳ್ಳಲಾಗುತ್ತಿದೆ. ಸರಿಯಾಗಿ ಊಟ-ತಿಂಡಿ, ಹಾಸಿಗೆ ನೀಡುತ್ತಿಲ್ಲ. ವಕೀಲರ ಭೇಟಿಗೂ ಅವಕಾಶ ಕೊಡುತ್ತಿಲ್ಲ ಎಂದು ಅವರ ಪಕ್ಷದ ಮುಖಂಡರು ಆರೋಪಿಸಿದ್ದಾರೆ.
ಪ್ರಧಾನಿಯಾಗಿದ್ದಾಗ ತಮಗೆ ಬಂದ ದುಬಾರಿ ಉಡುಗೊರೆಗಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ ತೋಶಾಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದ್ನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಇಮ್ರಾನ್ ಖಾನ್ಗೆ ಶನಿವಾರ ಜೈಲುಶಿಕ್ಷೆ ಹಾಗೂ 1 ಲಕ್ಷ ರು. ದಂಡ ವಿಧಿಸಿದೆ.
ಇಮ್ರಾನ್ ಅವರು ಪ್ರಕರಣದಲ್ಲಿ ತಾವು ತೋಷಖಾನಾ ಅಕ್ರಮ ಎಸಗಿಲ್ಲ ಎಂದು ಬಿಂಬಿಸಲು, ಖೊಟ್ಟಿದಾಖಲೆಗಳನ್ನು ಸೃಷ್ಟಿಸಿದ್ದು ಹಾಗೂ ತೋಷಖಾನಾ ಕಾಣಿಕೆಗಳ ಕುರಿತು ನಕಲಿ ವಿವರಗಳನ್ನು ಚುನಾವಣಾ ಸ್ಪರ್ಧೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು ರುಜುವಾತಾಗಿದೆ. ಹೀಗಾಗಿ ಅವರಿಗೆ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ. ಪಾಕಿಸ್ತಾನದ ಚುನಾವಣಾ ಆಯೋಗ ಕಳೆದ ವರ್ಷ ಇಮ್ರಾನ್ ವಿರುದ್ಧ ಭ್ರಷ್ಟಚಾರದ ಪ್ರಕರಣ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ ಅವರನ್ನು ಈ ಹಿಂದೆ ಸಂಸತ್ ಸದಸ್ಯತ್ವದಿಂದಲೂ ವಜಾಗೊಳಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.