ನವದೆಹಲಿ: ಇಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತಿದೆ. ಅವುಗಳ ಸಂರಕ್ಷಣೆ ಮತ್ತು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜಗತ್ತಿನಾದ್ಯಂತ ಪ್ರತಿ ವರ್ಷ ಆಗಸ್ಟ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಭಾರತ ಸೇರಿದಂತೆ ವಿಶ್ವದ ಹಲವೆಡೆ ವಿಶ್ವ ಸಿಂಹ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಗುಜರಾತಿನಲ್ಲಿ ಪ್ರಮುಖ ಕಾರ್ಯಕ್ರಮ ನಡೆಯುತ್ತಿದ್ದು, ವಿಶ್ವ ಸಿಂಹ ದಿನಾಚರಣೆಯ ರಾಜ್ಯ ಮಟ್ಟದ ಆಚರಣೆಯನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ವರ್ಚುವಲ್ ಉಪಸ್ಥಿತಿಯಲ್ಲಿ ನಡೆಸಲಾಗುತ್ತಿದೆ, ಕಾರ್ಯಕ್ರಮ ಸೌರಾಷ್ಟ್ರದ ಹತ್ತು ಜಿಲ್ಲೆಗಳ ವ್ಯಾಪ್ತಿಯ 8,500 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ನೇರ ಪ್ರಸಾರವಾಗಲಿದೆ. ಕಾರ್ಯಕ್ರಮದ ಸಮಯದಲ್ಲಿ, ಮುಖ್ಯಮಂತ್ರಿಗಳು ಸಿಂಹಗೀತೆಯನ್ನು ಬಿಡುಗಡೆ ಮಾಡುತ್ತಾರೆ ಮತ್ತು ಸಿನ್ಹ್ ಸುಚ್ನಾ’ ವೆಬ್ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸುತ್ತಾರೆ.
ಗುಜರಾತಿನ ಗಿರ್ ರಾಷ್ಟ್ರೀಯ ಉದ್ಯಾನವನವು ವಿಶ್ವದಲ್ಲೇ ಏಷ್ಯಾಟಿಕ್ ಸಿಂಹಗಳ ಏಕೈಕ ನೈಸರ್ಗಿಕ ನೆಲೆಯಾಗಿದೆ. ಅರಣ್ಯ ಇಲಾಖೆ ಮತ್ತು ನಾಗರಿಕರ ನಿರಂತರ ಪ್ರಯತ್ನದ ನಂತರ, ಜೂನ್ 2020 ರ ಹೊತ್ತಿಗೆ ಏಷ್ಯಾಟಿಕ್ ಸಿಂಹಗಳ ಸಂಖ್ಯೆ 674 ಕ್ಕೆ ಏರಿದೆ. ಏಷ್ಯಾಟಿಕ್ ಸಿಂಹಗಳ ಜನಸಂಖ್ಯೆಯ ಹೆಚ್ಚಳವು ಸೌರಾಷ್ಟ್ರದ ಸುಮಾರು ಒಂಬತ್ತು ಜಿಲ್ಲೆಗಳಲ್ಲಿ ಅವುಗಳ ಚಲನೆಯನ್ನು ಸುಗಮಗೊಳಿಸಿದೆ. ಸಸನ್-ಗಿರ್ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ರಾಮ್ ಪ್ರಕಾರ, ಸಿಂಹಗಳ ಸಂರಕ್ಷಣೆಯಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಭೌತಿಕ ಮತ್ತು ವರ್ಚುವಲ್ ಕಾರ್ಯಕ್ರಮಗಳ ಮೂಲಕ ಈ ವರ್ಷ ವಿಶ್ವ ಸಿಂಹ ದಿನಾಚರಣೆಯನ್ನು ಆಚರಿಸಲಾಗುವುದು ಎಂದಿದ್ದಾರೆ.
World Lion Day is an occasion to celebrate the majestic lions that captivate our hearts with their strength and magnificence. India is proud to be home to the Asiatic Lions and over the last few years there has been a steady rise in the lion population in India. I laud all those… pic.twitter.com/ohWcPP2Ofe
— Narendra Modi (@narendramodi) August 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.