ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಗುರುವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಓರ್ವ ಸೇನಾ ಸಿಬ್ಬಂದಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅನಂತ್ನಾಗ್ ಜಿಲ್ಲೆಯ ಕೋಕೆರ್ನಾಗ್ ಪ್ರದೇಶದ ಅಥ್ಲಾನ್ ಗಡೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದ ವೇಳೆ ಅಡಗಿಕೊಂಡಿದ್ದ ಉಗ್ರರು ಅವರ ಮೇಲೆ ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
“ಈ ಸ್ಫೋಟದಲ್ಲಿ ಇಬ್ಬರು ನಾಗರಿಕರು ಮತ್ತು ಸೇನಾ ಯೋಧ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ವೈದ್ಯರು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.
#NewsFlash : Terrorists lobbed grenade at #IndianArmy while during cordon and search operation in Ahlan Gadool area of south Kashmir's #Anantnag district. One Army soldier and two civilians injured.
Search operation underway to nab the attackers.#TYPNews pic.twitter.com/BjXINIZteC
— Jammu Kashmir News Network 🇮🇳 (@TheYouthPlus) August 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.