ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಜಿಎಸ್ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಆನ್ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್ಗಳ ಮೇಲೆ ಶೇಕಡಾ 28ರಷ್ಟು ತೆರಿಗೆ ವಿಧಿಸಲು ಈ ಮಸೂದೆ ಮಂಡನೆಯಾಗಿದ್ದು, ಲೋಕಸಭೆ ಅಂಗೀಕರಿಸಿದೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ತಿದ್ದುಪಡಿ) ಮಸೂದೆ 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್ಲೈನ್ ಗೇಮಿಂಗ್ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ IIIರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.