ಹುಬ್ಬಳ್ಳಿ: ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಹುಬ್ಬಳ್ಳಿಯಲ್ಲಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಸ್ವಾತಂತ್ರ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಧ್ವಜಗಳ ತಯಾರಿಕೆ ಪ್ರಸ್ತುತ ಭರದಿಂದ ಸಾಗುತ್ತಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆಸುವ ಗುರಿಯನ್ನು ಸಂಸ್ಥೆ ಹೊಂದಿದೆ.
ಹರ್ ಘರ್ ತಿರಂಗಾ ಅಭಿಯಾನದಿಂದಾಗಿ ಕಳೆದ ವರ್ಷದಲ್ಲಿ ಭಾರೀ ಸಂಖ್ಯೆಯ ರಾಷ್ಟ್ರಧ್ವಜಗಳು ಮಾರಾಟ ಕಂಡಿದ್ದವು. ಕಳೆದ ವರ್ಷ ಸ್ವಾತಂತ್ರ್ಯದ 75 ವರ್ಷಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗ’ ಅಭಿಯಾನವನ್ನು ಘೋಷಿಸಿದ ಹಿನ್ನೆಲೆಯಲ್ಲಿ ವಹಿವಾಟು ದಾಖಲೆ ಬರೆದಿತ್ತು.
ಈ ವರ್ಷ ಸತತ ಎರಡನೇ ಬಾರಿಗೆ ವಹಿವಾಟು 1.5 ಕೋಟಿ ರೂಪಾಯಿಗಳ ಗಡಿ ದಾಟುವ ನಿರೀಕ್ಷೆ ಇದೆ. ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಖಾದಿ ಉತ್ಪನ್ನ ಮತ್ತು ರಾಷ್ಟ್ರಧ್ವಜ ತಯಾರಿಕಾ ಘಟಕದ ನಿರ್ವಹಣೆ ಮಾಡುತ್ತಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘದ ಪದಾಧಿಕಾರಿಗಳು, ಘಟಕವು ಏಪ್ರಿಲ್ 2023 ರಿಂದ ಜುಲೈ 2023 ರ ನಡುವೆ 1.10 ಕೋಟಿ ರೂಪಾಯಿ ಮೌಲ್ಯದ ವಿವಿಧ ಗಾತ್ರದ ಧ್ವಜಗಳನ್ನು ಮಾರಾಟ ಮಾಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.