ನವದೆಹಲಿ: 1947 ರ ವಿಭಜನೆಯ ಸಮಯದಲ್ಲಿ ನಡೆದ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಇಂದು ದೇಶ ವಿಭಜನೆಯ ಕರಾಳ ಸ್ಮರಣಾರ್ಥ ದಿನವನ್ನು ಆಚರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 14 ಅನ್ನು ‘ವಿಭಜನ್ ವಿಭಿಷಿಕಾ ಸ್ಮೃತಿ ದಿವಸ್’ ಅಥವಾ ‘ದೇಶ ವಿಭಜನೆಯ ಕರಾಳ ಸ್ಮರಣಾರ್ಥ ದಿನ’ ಎಂದು ಘೋಷಿಸಿದ್ದರು.
ವಿಭಜನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರನ್ನು ಈ ದಿನ ಸ್ಮರಿಸಲಾಗುತ್ತಿದೆ. ವಿಭಜನೆಯಿಂದ ಉಂಟಾದ ದ್ವೇಷ ಮತ್ತು ಹಿಂಸಾಚಾರದಿಂದಾಗಿ ಲಕ್ಷಾಂತರ ಜನರು ವಸತಿಹೀನರಾದರು ಮತ್ತು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಸಾಮಾಜಿಕ ವಿಭಜನೆ, ಅಸಂಗತತೆಯ ವಿಷವನ್ನು ತೊಡೆದುಹಾಕಲು ಮತ್ತು ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಈ ದಿನವು ನಮಗೆ ನೆನಪಿಸುತ್ತದೆ ಎಂದಿದ್ದಾರೆ.
विभाजन विभीषिका स्मृति दिवस उन भारतवासियों को श्रद्धापूर्वक स्मरण करने का अवसर है, जिनका जीवन देश के बंटवारे की बलि चढ़ गया। इसके साथ ही यह दिन उन लोगों के कष्ट और संघर्ष की भी याद दिलाता है, जिन्हें विस्थापन का दंश झेलने को मजबूर होना पड़ा। ऐसे सभी लोगों को मेरा शत-शत नमन।
— Narendra Modi (@narendramodi) August 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.