ನವದೆಹಲಿ: ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹರ್ ಘರ್ ತಿರಂಗಾ ಅಭಿಯಾನವು ಭಾನುವಾರ ಪ್ರಾರಂಭವಾಗಿದ್ದು, ಜನರಿಂದ ಉತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಆಗಸ್ಟ್ 15 ರವರೆಗೆ ನಡೆಯಲಿರುವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
In the spirit of the #HarGharTiranga movement, let us change the DP of our social media accounts and extend support to this unique effort which will deepen the bond between our beloved country and us.
— Narendra Modi (@narendramodi) August 13, 2023
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಮೂಲಕ ಜನರಿಗೆ ಮನವಿ ಮಾಡಿದ ಮೋದಿ ಅವರು ತಿರಂಗಾದೊಂದಿಗಿನ ಫೋಟೋಗಳನ್ನು harghartiranga.com ನಲ್ಲಿ ಅಪ್ಲೋಡ್ ಮಾಡಲು ಕರೆನೀಡಿದ್ದರು. ಅದರಂತೆ ಕೋಟ್ಯಂತರ ಮಂದಿ ತಿರಂಗಾದೊಂದಿಗಿನ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ.
ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾನೆ ಮತ್ತು ಇದು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ಮತ್ತಷ್ಟು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಇದುವರೆಗೆ ಮೂರು ಕೋಟಿಗೂ ಹೆಚ್ಚು ಮಂದಿ ತಿರಂಗಾ ಜೊತೆಗಿನ ಸೆಲ್ಫಿ ಅಪ್ಲೋಡ್ ಮಾಡಿದ್ದಾರೆ.
ಹರ್ ಘರ್ ತಿರಂಗಾ ಆಂದೋಲನದ ಉತ್ಸಾಹದಲ್ಲಿ ಜನರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸುವಂತೆಯೂ ಪ್ರಧಾನಿ ಮನವಿ ಮಾಡಿದ್ದಾರೆ.
ರಾಷ್ಟ್ರ ಮತ್ತು ಜನರ ನಡುವಿನ ಬಾಂಧವ್ಯವನ್ನು ಗಾಢವಾಗಿಸುವ ಈ ವಿಶಿಷ್ಟ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಅವರು ಜನರನ್ನು ಕೋರಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಸರ್ಕಾರವು ಹರ್ ಘರ್ ತಿರಂಗವನ್ನು ಆಚರಿಸುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಜನ ಸಹಭಾಗಿತ್ವವನ್ನು ಉತ್ತೇಜಿಸುವ ಉದ್ದೇಶವನ್ನೂ ಇದು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.