ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮತ್ತೆ ಭಾರಿ ಮಳೆಯಾಗುತ್ತಿದ್ದು ಮೇಘಸ್ಪೋಟ ಸಂಭವಿಸಿದೆ, ಇದರಿಂದಾಗಿ 7 ಮಂದಿ ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೇಘ ಸ್ಪೋಟದ ಕಾರಣದಿಂದ ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ.
ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಹಾಗೂ ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .
ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.