ಬೆಂಗಳೂರು: 77ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಅವರು ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿದರು.
ಬಳಿಕ ಜನತೆಯನ್ನುದ್ದೇಷಿಸಿ ಮಾತನಾಡಿದ ಅವರು, ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು.
ಇದೇ ವೇಳೆ 5 ಗ್ಯಾರಂಟಿಗಳಪ್ರಸ್ತಾಪ ಮಾಡಿದ ಸಿಎಂ, ಶಕ್ತಿ ಯೋಜನೆಯಿಂದ ನಿತ್ಯ 50-60 ಲಕ್ಷ ಮಹಿಳೆಯರು ನಿತ್ಯ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೂವರೆಗೆ 38.54 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಆಗಸ್ಟ್ 27 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದೆ. ಇದುವರೆಗೆ ಗೃಹಜ್ಯೋತಿ ಯೋಜನೆಗೆ 1.49 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ, ಬಾಡಿಗೆದಾರರೂ ಇದರ ಪ್ರಯೋಜನ ಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.