ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸದೈವ್ ಅಟಲ್ನಲ್ಲಿ ಅಟಲ್ ಜೀ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಅನುರಾಗ್ ಸಿಂಗ್ ಠಾಕೂರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಪ್ರಮುಖ ನಾಯಕರು ಕೂಡ ಶ್ರದ್ಧಾಂಜಲಿ ಸಲ್ಲಿಸಿದರು.
ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, “ಅಟಲ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಲು ನಾನು ಭಾರತದ 140 ಕೋಟಿ ಜನರೊಂದಿಗೆ ಸೇರುತ್ತೇನೆ. ಅವರ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಯಿತು. ಅವರು ನಮ್ಮ ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸುವಲ್ಲಿ ಮತ್ತು ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ 21 ನೇ ಶತಮಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು” ಎಂದರು.
ದೇಶದ 10 ನೇ ಪ್ರಧಾನ ಮಂತ್ರಿಯಾಗಿದ್ದ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದ ನಂತರ 18 ಆಗಸ್ಟ್ 2018 ರಂದು ಕೊನೆಯುಸಿರೆಳೆದರು. ವಾಜಪೇಯಿ ಅವರು 1998 ರಿಂದ 2004 ರ ನಡುವೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರಗಳನ್ನು ಮುನ್ನಡೆಸಿದರು ಮತ್ತು ಭಾರತದ ಪ್ರಧಾನಿಯಾದ ಮೊದಲ ಬಿಜೆಪಿಗ ಎನಿಸಿಕೊಂಡರು.
I join the 140 crore people of India in paying homage to the remarkable Atal Ji on his Punya Tithi. India benefitted greatly from his leadership. He played a pivotal role in boosting our nation’s progress and in taking it to the 21st century in a wide range of sectors.
— Narendra Modi (@narendramodi) August 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.